ಜೀವನವನ್ನು ಅರ್ಥೈಸಿಕೊಳ್ಳುವ ಹುಡುಗಾಟದಲ್ಲಿ....!!!!

ಸೋಮವಾರ, ನವೆಂಬರ್ 23, 2009

ಎಲ್ಲಾ ಪ್ರಚಾರವೂ ಒಳ್ಳೆಯದೇ!

" Any Publicity is good publicity" ಅಂತಾರೆ. ನಮ್ಮ ಹೆಸರನ್ನು ನಾವೇ ಹೇಳುವುದಕ್ಕಿಂತ ಇನ್ನೊಬ್ಬರು ಹೇಳಿದಾಗ ಹೆಚ್ಚು ಸಂತಸವಾಗುತ್ತದೆ.
ನನ್ನ ಅನಿಸಿಕೆಯನ್ನು ಖಂಡಿಸಿ ಪ್ರಿನ್ಸಟನ್ ವಿವಿಯ ಶಾಂತಾರಾಮ್ ವಿಜಯಕರ್ನಾಟಕದಲ್ಲಿ ಬರೆದಿದ್ದಾರೆ. ಇಷ್ಟು ಸಂತೋಷ ನನ್ನ ಲೇಖನ ಪ್ರಕಟ ಆದಾಗಲೂ ಆಗಿರಲಿಲ್ಲ!
ಶಾಂತಾರಾಂ ಅವರನ್ನು ಅವರ ನಿವೇಶದಲ್ಲೇ ತಿಂಗಳ ಹಿಂದೆ ನನನ್ನ ಸ್ನೇಹಿತರೊಂದಿಗೆ ಭೇಟಿಯಾಗಿದ್ದೆ. ಅವತ್ತು ಸಾಹಸಸಿಂಹ ವಿಷ್ಣುವರ್ಧನ ಜನುಮದಿನ.
"ನಾನೂ ಚಾಮರಾಜಪೇಟೆಯಲ್ಲಿ ಓದಿದವನು. ನಾನೂ ನಿಮ್ಮ ಸಾಹಸಸಿಂಹ ಕ್ಲಾಸ್ ಮೇಟುಗಳು. ಸಂಪತ ಕುಮಾರ ಅಂತ ಅವನ ಹೆಸರು. ಕಡೆಗೆ
ಓದು ಮುಗಿದ ಮೇಲೆ ಇಲ್ಲಿ ಬದುಕಲು ಜಾಗವಿಲ್ಲದೇ ಹೊಟ್ಟೆಪಾಡಿಗಾಗಿ ಅಮೇರಿಕೆಗೆ ತೆರಳಿದೆ" ಎಂದು ಮಾತಿಗಾರಂಭಿಸಿದರು.
ತಾತ್ವಿಕವಾಗಿ ನಾವು ವಿರೋಧಿಗಳಾದರೂ ವಯಕ್ತಿಕಮಟ್ಟದಲ್ಲಿ ಅವರ ತೋರಿದ ಸ್ನೇಹ ನನಗಿಷ್ಟವಾಯಿತು! ಮೊದಲು ಬಿಯರಗಾಗಿ ಆಹ್ವಾನಸಿದವರು ನಮಗೆ ಅಭ್ಯಾಸವಿಲ್ಲವೆಂದು ತಿಳಿದು
ಕಾಫಿಯಿಂದ ಆದರಿಸಿದರು.
ಪ್ರಸ್ತುತ ಲೇಖನ ಎರಡು ಮೂರು ತಿಂಗಳ ಹಿಂದೆಯೇ ಪ್ರಕಟವಾಗಬೇಕಿತ್ತು. ಭಟ್ಟರು ಈಗ ಕೃಪೆತೋರಿದರೆನಿಸುತ್ತದೆ! ಈ ಲೇಖನದ ಬಗ್ಗೆ ಹೇಳಿ ನಿಮ್ಮನ್ನು ಖಂಡಿಸಿದ್ದೇನೆ, ವ್ಯಂಗ್ಯವಾಡಿದ್ದೇನೆ ಎಂದರು. ಆದರೆ ಈ ಲೇಖನದಲ್ಲಿ ಒಂದು ಕಡೆ ಮಾತ್ರ ನನ್ನ ಹೆಸರನ್ನು ಉಲ್ಲೇಖಿಸಿದ್ದಾರೆ.ಅದೂ ಜೆಫರಿ ಬಗ್ಗೆ ಹೇಳುವಾಗ. ನನ್ನೆದುರಿಗಿನ ಮಾತಿಗೂ ಲೇಖನಕ್ಕೂ ಸಂಪೂರ್ಣ ಸಾಮ್ಯಗಳಿವೆ. ಸೆರಾಲಿನಿ, ಜೆಫರಿ, ವಂದನಾಶಿವ, ನಾಗೇಶ ಹೆಗಡೆ ಇವರೆಲ್ಲ ಕಳ್ಳರು; ಇವರಿಗೇನು ತಿಳಿದಿದೆ ಎಂದು ಹಂಗಿಸಿದರು. ಬಿಟಿ ಹತ್ತಿಯ ಬಗ್ಗೆ ಅಧ್ಯಯನ ನಡೆಸಿದ ಝಕಾರಿಯಾ ಮತ್ತಿತರರ ಸಂಶೋಧನೆಯನ್ನು ಅಲ್ಲಗಳೆದು ಅವರೆಲ್ಲ ಯಾವುದೋ ಭ್ರಮೆಗೊಳಗಾಗಿದ್ದಾರೆ ಎಂದು ಜರಿದರು. ನಾನು ಗಮನಿಸಿದ ಒಂದು ಅಂಶವೆಂದರೆ ಇವರ ಪ್ರಕಾರ ಬಿಟಿ ಬಗ್ಗೆ ಮಾತಾಡಲು ಪಿಎಚ್.ಡಿ ಇದ್ದವರಿಗೆ ಮಾತ್ರ ಹಕ್ಕು ಇದೆ! ಕಣ್ಣೆದುರಿಗೆ ಕಂಡ ಸತ್ಯವನ್ನು ಹೇಳಿದರೂ ಅದು ಪಿಎಚ್.ಡಿ ಹೊಂದಿದವನು ಹೇಳಿದರೆ ಮಾತ್ರ ಸತ್ಯ! ಡಾಕ್ಟರೇಟ ಗಳನ್ನು ಬಿಟ್ಟು ಬೇರೆಯವರು ಬಿಟಿ ಬಗ್ಗೆ ಮಾತನಾಡಲು ಅರ್ಹರಲ್ಲ!
ಇನ್ನು Horizontal gene transfer ಎಂಬ ಮಾತೇ ಸುಳ್ಳು. gene transfer, ಪ್ರಕೃತಿಯಲ್ಲಿ ಲಕ್ಷಾಂತರ ವರ್ಷಗಳಿಂದ ನಡೆಯುತ್ತಿದೆ ಎಂಬ ವಾದ ಮುಂದಿಟ್ಟರು. ಅದೇನೋ ದಿಟ ಆದರೆ ಅಕ್ಕಿಯಿಂದ ಅಕ್ಕಿಗೆ ಜೋಳದಿಂದ ಜೋಳಕ್ಕೆ ಅಂದರೆ ಒಂದೇ ತಳಿಯ ಸಸ್ಯಗಳ ನಡುವೆ gene transfer ಆಗಿವೆಯೇ ಹೊರತು ಇವರು ಮಾಡಿರುವಂತೆ ಣಿಗಳ,ಬ್ಯಾಕ್ಟೀರಿಯಾಗಳ ನಡುವೆ ಮತ್ತು ಸಸ್ಯಗಳ ನಡುವೆ gene transfer ಆಗಿಲ್ಲ! ರಸಾಯನಿಕ ಗೊಬ್ಬರಗಳಿಂದ ಯಾವ ಹಾನಿಯೂ ಇಲ್ಲ. ಅದಕ್ಕೆ ನಮ್ಮ ಶರೀರ ಹೊಂದಿಕೊಳ್ಳುತ್ತದೆ ಎಂದು ನಮ್ಮ ಕಿವಿಯ ಮೇಲೆ ಹೂವಿಡಲು ನೋಡಿದರು. ಶರೀರ ಹೊಂದಿಕೊಳ್ಳುತ್ತದೆ ಎಂಬುದು ನಿಜ, ಹೊಂದಿಕೊಳ್ಳಲು ಹತ್ತಾರು ತಲೆಮಾರುಗಳು ಹೋಗಬೆಕು. ಅಷ್ಟರಲ್ಲಿ ಮನುಕುಲಕ್ಕೆ ಆಗಬಬೇಕಾದ ಹಾನಿ ಆಗಿಹೋಗಿರುತ್ತದೆ!
ಸುಮಾರು ಎರಡು ತಾಸುಗಳ ಕಾಲ ನಡೆದ ಸಂಭಾಷಣೆಯನ್ನು ಇಲ್ಲಿಡುವುದು ಕಷ್ಟ. ಕನಿಷ್ಟ ಸಾಮಾನ್ಯ ಜ್ಞಾನ ಇರುವ ಯಾರಿಗಾದರೂ ಮೇಲಿನ ಅಂಶಗಳು ಅರ್ಥವಾಗುತ್ತವೆ. ಇದಕ್ಕೆ ಸಾಕ್ಷಿ ಬೇರೆ ಬೇಕು ಅಂತ ಕೇಳುತ್ತಾರೆ. ಹಾಳಾಗಿ ಹೋಗಲಿ ಎಂದು ಸಾಕ್ಷಿಗಳನ್ನು ಮುಂದಿಟ್ಟರೂ ಒಪ್ಪಲು ಕೆಲ ಮೂರ್ಖರು ತಯಾರಿರುವುದಿಲ್ಲ. ಅಮೇರಿಕ ಎಂದರೆ ಸಾಚಾತನದ ಪಳೆಯುಳಿಕೆ ಎಂಬಂತೆ ವರ್ತಿಸುವ ವಿತಂಡರಿಗೆ ಏನು ಹೇಳಲಾದೀತು?

2 ಕಾಮೆಂಟ್‌ಗಳು:

AntharangadaMaathugalu ಹೇಳಿದರು...

ವಿತಂಡವಾದಕರಿಂದ ದೂರವುಳಿಯುವುದೊಳ್ಳೆಯದು ಹರ್ಷ ಅವರೇ... ಎಲ್ಲರಿಗೂ ಅವರದೇ ಆದ ದೃಷ್ಟಿ (vision) ಇರುತ್ತಾದ್ದರಿಂದ, ಅವರದೇ ಆದ ಅಭಿಪ್ರಾಯವೂ ಇರತ್ತೆ...

ಶ್ಯಾಮಲ

Raghupati raaghava ಹೇಳಿದರು...

ಹರ್ಷ,ಶಾಂತಾರಾಮ್ ಅಷ್ಟೆಲ್ಲ ಹೇಳಿದರು ಅಂತ ನನ್ಗನ್ನಿಸಲ್ಲ, ಇದು ಭಟ್ರು, ಪ್ರತಾಪ ಅಂಡ್ ಟೀಂ ಕೂತು ಬರೆದ ಹಾಗಿದೆ, ಯಾಕೆಂದ್ರೆ ಅಲ್ಲಿ ಬಳಸಿರುವ ಪದಗಳು (ಅವರಿಗೆ ವಿಜ್ಞಾನದ 'ವಿ' ನೆ ಗೊತ್ತಿಲ್ಲ ಮುಂತಾದವು) ಒಬ್ಬ ವಿಜ್ಞಾನಿಯ ಮಾತಿಗಿಂತ ಒಬ್ಬ ಬರಹಗಾರನ ಕುಟಿಲ ಬಳಕೆ ಅಂತಲೇ ಆನಿಸುತ್ತೆ ನನಗೆ. ಇದು ವಿಕದ ಭಟ್ರು, ಪ್ರತಾಪ್ ಸಿಂಹನ ಕಿತಾಪತಿ. ಶಾಂತಾರಾಮ ನಷ್ಟೇ ಇವರೂ Dangerous. ಏನೇ ಆಗಲಿ, ಶಾಂತರಾಮ ನಂತವರು ನಿಮ್ಮ ವಾದ ಗಮನಿಸಿದ್ದಾರೆ ಅಂದ್ರೆ ಅದು ನಿಮ್ಮ ವಾದಕ್ಕೆ ಸಿಕ್ಕ ಜಯವೆ. ನಿಮ್ಮ ರೈತಪರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಶುಭವಾಗಲಿ.